- Advertisement -
- Advertisement -


ಚಿಕ್ಕಬಳ್ಳಾಪುರ: ಎಸ್‍ಎಸ್‍ಎಲ್‍ಸಿ ಪೂರ್ವ ಸಿದ್ದತಾ ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ 1ನೇ ವಾರ್ಡಿನಲ್ಲಿ ಸಂಭವಿಸಿದೆ. ಬೇಬಿ ಮೃತ ವಿದ್ಯಾರ್ಥಿನಿ. ಬೇಬಿ ವಾಪಸಂದ್ರದ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.

ಬುಧವಾರದಿಂದ ಆರಂಭವಾಗಿರುವ ಪೂರ್ವ ಸಿದ್ದತಾ ಪರೀಕ್ಷೆಗೆ ಹಾಜರಾಗಿರಲಿಲ್ಲ. ಶಾಲೆಯ ಮುಖ್ಯ ಶಿಕ್ಷಕರು ಬೇಬಿಯನ್ನು ಪರೀಕ್ಷೆಗೆ ಹಾಜರಾಗುವಂತೆ ಇಬ್ಬರು ವಿದ್ಯಾರ್ಥಿಗಳನ್ನು ಬೇಬಿಯ ಮನೆಗೆ ಕಳುಹಿಸಿದ್ದಾರೆ.
ಶಾಲೆಗೆ ಹೋಗಲು ಆಸಕ್ತಿ ಇಲ್ಲದೇ ವಿದ್ಯಾರ್ಥಿನಿ, ಮನೆಯಲ್ಲಿ ಯಾರು ಇಲ್ಲದ ಸಂದರ್ಭವನ್ನು ನೋಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


- Advertisement -