Saturday, October 24, 2026
spot_imgspot_img
spot_imgspot_img

ಮಾ.21ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭ

- Advertisement -
- Advertisement -

ಮಾ.21ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ವ್ಯವಸ್ಥಿತ ಹಾಗೂ ನ್ಯಾಯಸಮ್ಮತ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಶುಕ್ರವಾರ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳ ಸಂಬಂಧ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಪರೀಕ್ಷಾ ಕೇಂದ್ರಗಳ ಮೇಲೆ ತೀವ್ರ ನಿಗಾ ವಹಿಸಬೇಕು. ಯಾವುದೇ ರೀತಿಯಿಂದ ಲೋಪದೋಷ ಆಗದಂತೆ ಕಾರ್ಯ ನಿರ್ವಹಿಸಬೇಕು.ಜಿಲ್ಲೆಯ ವ್ಯಾಪ್ತಿಯ 133 ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದ್ದು, ಪರೀಕ್ಷಾ ಕೇಂದ್ರದ 200 ಮೀ. ಸುತ್ತ ಸಾರ್ವಜನಿಕರು ಮತ್ತು ಪಾಲಕರ ಪ್ರವೇಶ ನಿಷೇಧಿಸಲಾಗಿದೆ. ಜೆರಾಕ್ಸ್ ಅಂಗಡಿಗಳನ್ನು ಕೂಡ ತೆರೆಯುವಂತಿಲ್ಲ ಎಂದರು.ಮಾ.21ರಿಂದ ಏ.4 ಪರೀಕ್ಷೆಗಳು ನಡೆಯಲಿವೆ.

ಈ ಬಾರಿ ಕಟ್ಟನಿಟ್ಟಾಗಿ ಪರೀಕ್ಷೆ ನಡೆಯಲಿದ್ದು 133 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲ್ಲಿದೆ. ಜಿಲ್ಲೆಯಲ್ಲಿ 19,114 ಬಾಲಕರು ಹಾಗೂ 18,790 ಬಾಲಕಿಯರು ಸೇರಿದಂತೆ ಒಟ್ಟು 37,904 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಸರ್ಕಾರ ನೀಡುವ ಎಲ್ಲಾ ಆದೇಶಗಳನ್ನು ಪರಿಪಾಲನೆ ಮಾಡುವ ಮೂಲಕ ಪರೀಕ್ಷೆ ಸುವ್ಯವಸ್ಥೆ ನಡೆಯುವಂತೆ ನೋಡಿಕೊಳ್ಳಬೇಕು ಹಾಗೂ ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಅಭ್ಯರ್ಥಿಗಳ ಅನುಕೂಲಕ್ಕಾಗಿ ಸೂಕ್ತ ಸೂಚನಾ ಫಲಕಗಳ ವ್ಯವಸ್ಥೆ ಮಾಡಲಾಗಿದೆ, ಅಭ್ಯರ್ಥಿಗಳಿಗೆ ಅಗತ್ಯ ಅಸನದ ವ್ಯವಸ್ಥೆ ಮಾಡಲಾಗಿದ್ದು, ಕುಡಿಯುವ ನೀರು, ಶೌಚಾಲಯ ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಮೊಬೈಲ್ ಸ್ವಾಧೀನಾಧಿಕಾರಿಯನ್ನು ನೇಮಕ ಮಾಡಲಾಗಿದೆ.

ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಪ್ರಶ್ನಾಪತ್ರಿಕೆ ಪಾಲಕರನ್ನು ಆಯೋಜಿಸಲಾಗಿದೆ ಎಂದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಹುಕೇಶ್ ಕುಮಾರ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು, ಡಿಸಿಪಿ ಮುತ್ತುರಾಜ್, ಡಿಡಿಪಿಐ ಜವರೇಗೌಡ ಹಾಗೂ ಡಿಡಿಪಿಯು ಮರಿಸ್ವಾಮಿ ಹಾಗೂ ಶಾಲೆಯ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!