Friday, June 5, 2026
spot_imgspot_img
spot_imgspot_img

ಗಾಯಕರು ಹಾಡುತ್ತಿರುವಾಗಲೇ ವೇದಿಕೆ ಕುಸಿದು ಮಹಿಳೆ ಸಾವು; 17 ಮಂದಿಗೆ ಗಾಯ

- Advertisement -
- Advertisement -

ಜಾಗರಣೆಗಾಗಿ ಭಕ್ತರಿಗೆ ಕೂರಲು ಸಿದ್ಧಪಡಿಸಿದ್ದ ವೇದಿಕೆ ಕುಸಿದು ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡ ಘಟನೆ ದೆಹಲಿಯ ಕಲ್ಕಾಜಿ ದೇಗುಲದಲ್ಲಿ ನಡೆದಿದೆ.

ಘಟನೆಯಲ್ಲಿ 45 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಘಟನೆ ಸಂಭವಿಸಿದ ಕೂಡಲೇ ಮಹಿಳೆಯನ್ನು ಇಬ್ಬರು ವ್ಯಕ್ತಿಗಳು ಆಟೋ ರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟುಹೊತ್ತಿಗಾಗಲೇ ಮಹಿಳೆ ಸಾವನ್ನಪ್ಪಿದ್ದರು. ಶುಕ್ರವಾರ ರಾತ್ರಿ ಅನುಮತಿ ಇಲ್ಲದೇ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ 1,600ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!