Thursday, July 16, 2026
spot_imgspot_img
spot_imgspot_img

ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ–ಫಾರ್ಮ್‌ ವಿತರಣೆಗೆ ಆ. 8ರ ವರೆಗೆ ಅವಕಾಶ

- Advertisement -
- Advertisement -

ಬೆಂಗಳೂರು: ಕರ್ನಾಟಕ, ದೆಹಲಿ, ಪಂಜಾಬ್‌ ಮತ್ತು ತೆಲಂಗಾಣದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಕೆಲವು ದಿನಗಳವರೆಗೆ ವಿಸ್ತರಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ಹಿನ್ನೆಲೆ ರಾಜ್ಯದಲ್ಲೂ ಫಾರ್ಮ್‌ (ನಮೂನೆ) ಹಿಂದಿರುಗಿಸಲು ಅವಧಿ ವಿಸ್ತರಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಈ ತಿಂಗಳ ಅಂತ್ಯದ ವರೆಗೆ ಬಿಎಲ್‌ಒಗಳಿಗೆ ಎಸ್‌ಐಆರ್‌ ನಮೂನೆ ವಿಸ್ತರಣೆಗೆ ಸಮಯ ಇತ್ತು. ಇದೀಗ ಆಗಸ್ಟ್‌ 8 ರ ಅವಧಿ ವಿಸ್ತರಿಸಲಾಗಿದೆ. ಬಿಎಲ್‌ಒಗಳು ಮನೆ ಮನೆಗೆ ತೆರಳಿ ನಮೂನೆ ಸಂಗ್ರಹಕ್ಕೆ ಆಗಸ್ಟ್‌ 8ರ ವರೆಗೆ ಅವಕಾಶ ನೀಡಲು ಚುನಾವಣಾ ಆಯೋಗ ಆದೇಶಿಸಿದೆ.

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್, ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಚುನಾವಣಾ ಆಯೋಗ ಮತ್ತಷ್ಟು ವೇಗ ನೀಡಿದೆ. ಈಗಾಗಲೇ 5.27 ಕೋಟಿಗೂ ಹೆಚ್ಚು ಎನ್ಯೂಮರೇಷನ್ ಫಾರ್ಮ್‌ಗಳನ್ನ ವಿತರಿಸಲಾಗಿದ್ದು, 13 ಜಿಲ್ಲೆಗಳಲ್ಲಿ ಶೇ.100ರಷ್ಟು ವಿತರಣೆ ಪೂರ್ಣಗೊಂಡಿದೆ. ವಾರಾಂತ್ಯದಲ್ಲೂ ವಿಶೇಷ ಅಭಿಯಾನ ನಡೆಸುವುದಾಗಿ ತಿಳಿಸಿದರು.

ಮತದಾರರ ಗಣತಿ ನಮೂನೆ ವಿತರಣೆ ರಾಜ್ಯಾದ್ಯಂತ ಭರದಿಂದ ಸಾಗುತ್ತಿದ್ದು, ಇಲ್ಲಿತನಕ 5 ಕೋಟಿ 27 ಲಕ್ಷ 15 ಸಾವಿರ 809 ಎನ್ಯೂಮರೇಷನ್ ಫಾರ್ಮ್‌ಗಳನ್ನ ವಿತರಿಸಲಾಗಿದೆ. ಈಗಾಗಲೇ 1 ಕೋಟಿ 99 ಲಕ್ಷ 51 ಸಾವಿರ 635 ಫಾರ್ಮ್‌ಗಳ ಡಿಜಿಟಲೀಕರಣ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಸುಮಾರು ಶೇ.40 ರಷ್ಟು ಡಿಜಿಟಲೀಕರಣ ನಡೆದಿದೆ ಎಂದರು.

ಉದ್ಯೋಗ, ವ್ಯವಹಾರ ಕಾರಣಗಳಿಂದ ವಾರದ ದಿನಗಳಲ್ಲಿ ಮನೆಗಳಲ್ಲಿ ಲಭ್ಯವಿರದ ಮತದಾರರ ಅನುಕೂಲಕ್ಕಾಗಿ ಶನಿವಾರ ಹಾಗೂ ಭಾನುವಾರ ರಾಜ್ಯಾದ್ಯಂತ ವಿಶೇಷ ಕ್ಯಾಂಪೇನ್ ಡೇ ನಡೆಸಲಾಗುತ್ತದೆ. ನಗರ ಪ್ರದೇಶಗಳಲ್ಲೂ ಇದೇ ಮಾದರಿಯ ವಿಶೇಷ ಅಭಿಯಾನ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

- Advertisement -

Related news

error: Content is protected !!