Wednesday, April 24, 2024
spot_imgspot_img
spot_imgspot_img

ಕೊರೊನಾ BIG BLAST:-ರಾಜ್ಯದಲ್ಲಿ ಇಂದು 8161 ಮಂದಿಗೆ ಸೋಂಕು..! ದಕ್ಷಿಣ ಕನ್ನಡದಲ್ಲಿ 247 , ಉಡುಪಿ 217 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 148 ಸೋಂಕಿತರ ಸಾವು.

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 8161 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 148 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 291826 ಕ್ಕೆಏರಿಕೆಯಾಗಿದೆ.ರಾಜ್ಯದಲ್ಲಿ    ಈವರೆಗೆ 204439 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2294 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 61 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 1538 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 35430 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:– ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 247 ಮಂದಿಗೆ ಸೋಂಕು ತಗುಲಿದೆ. 3 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 218 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 10778 ಆಗಿದ್ದು, ಇಲ್ಲಿಯವರೆಗೆ 8136 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2323 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 319 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 217 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 10453 ಆಗಿದ್ದು ,ಇಲ್ಲಿಯವರೆಗೆ 7615 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2748 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!