Sunday, September 13, 2026
spot_imgspot_img
spot_imgspot_img

ರಾಜ್ಯದಲ್ಲಿ ಇಂದು 8324 ಮಂದಿಗೆ ಕೊರೊನಾ ಸೋಂಕು..!* ದಕ್ಷಿಣ ಕನ್ನಡದಲ್ಲಿ 272 , ಉಡುಪಿ 172 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 115 ಸೋಂಕಿತರ ಸಾವು.

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 8324 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 115 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 327076 ಕ್ಕೆಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 235128 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2993 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 25 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2174 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 37315 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 272 ಮಂದಿಗೆ ಸೋಂಕು ತಗುಲಿದೆ. 7 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 236 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 12109 ಆಗಿದ್ದು, ಇಲ್ಲಿಯವರೆಗೆ 9209 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2550 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 350 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 172 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 11261 ಆಗಿದ್ದು ,ಇಲ್ಲಿಯವರೆಗೆ 8481 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2686 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!