Wednesday, June 17, 2026
spot_imgspot_img
spot_imgspot_img

ದಕ್ಷಿಣ ಕನ್ನಡದಲ್ಲಿ 146, ಉಡುಪಿ 103 ಮಂದಿಗೆ ಕೊರೊನಾ ಸೋಂಕು :ರಾಜ್ಯದಲ್ಲಿ ಇಂದು 6297 ಮಂದಿಗೆ ಕೊರೊನಾ ಸೋಂಕು..!

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 6297 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,66 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 776901 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 662329 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2821 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 36 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2798 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 64523 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 146 ಮಂದಿಗೆ ಸೋಂಕು ತಗುಲಿದೆ.299 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 28567 ಆಗಿದ್ದು, ಇಲ್ಲಿಯವರೆಗೆ 24984 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2940 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 641 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 103 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 21012 ಆಗಿದ್ದು ,ಇಲ್ಲಿಯವರೆಗೆ 19114 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1722 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!