Sunday, May 5, 2024
spot_imgspot_img
spot_imgspot_img

BIG BLAST:- ರಾಜ್ಯದಲ್ಲಿ ಇಂದು 10070 ಮಂದಿಗೆ ಕೊರೊನಾ ಸೋಂಕು..! ದಕ್ಷಿಣ ಕನ್ನಡದಲ್ಲಿ 493, ಉಡುಪಿ 275 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು  ಸೋಂಕಿತರ 130 ಸಾವು.

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 10070 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,130 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 611837 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 492412 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 4853 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 41 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2482 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 49475 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 493 ಮಂದಿಗೆ ಸೋಂಕು ತಗುಲಿದೆ.287 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 23439 ಆಗಿದ್ದು, ಇಲ್ಲಿಯವರೆಗೆ 17088 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.5804 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 545 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 275 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 17419 ಆಗಿದ್ದು ,ಇಲ್ಲಿಯವರೆಗೆ 15297 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1972 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!