Friday, March 29, 2024
spot_imgspot_img
spot_imgspot_img

ರಾಜ್ಯದಲ್ಲಿ ಇಂದು 8793 ಮಂದಿಗೆ ಕೊರೊನಾ ಸೋಂಕು..! ದಕ್ಷಿಣ ಕನ್ನಡದಲ್ಲಿ 322, ಉಡುಪಿ 212 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು  ಸೋಂಕಿತರ 125 ಸಾವು.

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 8793 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,125 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 620630 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 499506 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 4259 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 47 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2298 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 51389 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 322 ಮಂದಿಗೆ ಸೋಂಕು ತಗುಲಿದೆ.277 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 23761 ಆಗಿದ್ದು, ಇಲ್ಲಿಯವರೆಗೆ 17365 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.5837 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 557 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 212 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 17631 ಆಗಿದ್ದು ,ಇಲ್ಲಿಯವರೆಗೆ 15365 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2115 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!