Saturday, June 28, 2025
spot_imgspot_img
spot_imgspot_img

ರಾಜ್ಯದಲ್ಲಿ ಇಂದು 9886 ಮಂದಿಗೆ ಕೊರೊನಾ ಸೋಂಕು..! ದಕ್ಷಿಣ ಕನ್ನಡದಲ್ಲಿ 258, ಉಡುಪಿ 158 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು  ಸೋಂಕಿತರ 100 ಸಾವು.

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 9886 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,100 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 630516 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 508495 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 3925 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 21 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2001 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 53292 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 258 ಮಂದಿಗೆ ಸೋಂಕು ತಗುಲಿದೆ.344 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 24019 ಆಗಿದ್ದು, ಇಲ್ಲಿಯವರೆಗೆ 17709 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.5742 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 566 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 158 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 17789 ಆಗಿದ್ದು ,ಇಲ್ಲಿಯವರೆಗೆ 15662 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1973 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!