Saturday, April 20, 2024
spot_imgspot_img
spot_imgspot_img

ರಾಜ್ಯದಲ್ಲಿ ಇಂದು 9993 ಮಂದಿಗೆ ಕೊರೊನಾ ಸೋಂಕು..! ದಕ್ಷಿಣ ಕನ್ನಡದಲ್ಲಿ 272, ಉಡುಪಿ 224 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು  ಸೋಂಕಿತರ 91 ಸಾವು.

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 9993 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,91 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 657705 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 533074 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 5012 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 34 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 3354 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 55736 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 272 ಮಂದಿಗೆ ಸೋಂಕು ತಗುಲಿದೆ.382 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 24829 ಆಗಿದ್ದು, ಇಲ್ಲಿಯವರೆಗೆ 18786 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.5460 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 581 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 224 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 18362 ಆಗಿದ್ದು ,ಇಲ್ಲಿಯವರೆಗೆ 16128 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2074 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!