Friday, April 19, 2024
spot_imgspot_img
spot_imgspot_img

BIG BLAST:- ರಾಜ್ಯದಲ್ಲಿ ಇಂದು 10947 ಮಂದಿಗೆ ಕೊರೊನಾ ಸೋಂಕು..! ದಕ್ಷಿಣ ಕನ್ನಡದಲ್ಲಿ 447, ಉಡುಪಿ 209 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು  ಸೋಂಕಿತರ 113 ಸಾವು.

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 10947 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,113 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 668652 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 542906 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 5000 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 55 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2057 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 58624 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 447 ಮಂದಿಗೆ ಸೋಂಕು ತಗುಲಿದೆ.1214 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 25276 ಆಗಿದ್ದು, ಇಲ್ಲಿಯವರೆಗೆ 20000 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.4686 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 588 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 209 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 18571 ಆಗಿದ್ದು ,ಇಲ್ಲಿಯವರೆಗೆ 16313 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2096 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!