Friday, April 26, 2024
spot_imgspot_img
spot_imgspot_img

BIG BLAST:- ರಾಜ್ಯದಲ್ಲಿ ಇಂದು 10913 ಮಂದಿಗೆ ಕೊರೊನಾ ಸೋಂಕು..! ದಕ್ಷಿಣ ಕನ್ನಡದಲ್ಲಿ 376, ಉಡುಪಿ 177 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು  ಸೋಂಕಿತರ 114 ಸಾವು.

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 10913 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,114 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 690269 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 561610 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 5009 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 57 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 3045 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 62104 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 376 ಮಂದಿಗೆ ಸೋಂಕು ತಗುಲಿದೆ.268 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 25948 ಆಗಿದ್ದು, ಇಲ್ಲಿಯವರೆಗೆ 20854 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.4496 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 596 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 177 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 18987 ಆಗಿದ್ದು ,ಇಲ್ಲಿಯವರೆಗೆ 16917 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1906 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!