Saturday, April 20, 2024
spot_imgspot_img
spot_imgspot_img

ದಕ್ಷಿಣ ಕನ್ನಡದಲ್ಲಿ 139, ಉಡುಪಿ 117 ಮಂದಿಗೆ ಕೊರೊನಾ ಸೋಂಕು :ರಾಜ್ಯದಲ್ಲಿ ಇಂದು 4439 ಮಂದಿಗೆ ಕೊರೊನಾ ಸೋಂಕು..!

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 4439 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,32 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 802817 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 710843 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2468 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 20 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 6759 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 51672 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 139 ಮಂದಿಗೆ ಸೋಂಕು ತಗುಲಿದೆ.211 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29540 ಆಗಿದ್ದು, ಇಲ್ಲಿಯವರೆಗೆ 26335 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2540 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 663 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 117 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 21518 ಆಗಿದ್ದು ,ಇಲ್ಲಿಯವರೆಗೆ 20102 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1238 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!