Tuesday, June 9, 2026
spot_imgspot_img
spot_imgspot_img

ರಾಜ್ಯದಲ್ಲಿ ಇಂದು 7710 ಮಂದಿಗೆ ಕೊರೊನಾ ಸೋಂಕು..! ದಕ್ಷಿಣ ಕನ್ನಡದಲ್ಲಿ 266, ಉಡುಪಿ 74 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು  ಸೋಂಕಿತರ 65 ಸಾವು.

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 7710 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,65 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 548557 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 444658 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 4192 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 24 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 3854 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 40285 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 266 ಮಂದಿಗೆ ಸೋಂಕು ತಗುಲಿದೆ. 10 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 21030 ಆಗಿದ್ದು, ಇಲ್ಲಿಯವರೆಗೆ 15726 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.4808 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 494 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 74 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 1595 ಆಗಿದ್ದು ,ಇಲ್ಲಿಯವರೆಗೆ 14176 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1595 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!