Saturday, June 28, 2025
spot_imgspot_img
spot_imgspot_img

ರಾಜ್ಯದಲ್ಲಿ ಇಂದು 8811 ಮಂದಿಗೆ ಕೊರೊನಾ ಸೋಂಕು..! ದಕ್ಷಿಣ ಕನ್ನಡದಲ್ಲಿ 420, ಉಡುಪಿ 57 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು  ಸೋಂಕಿತರ 86 ಸಾವು.

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 8811 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,86 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 566023 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 455719 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 4083 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 27 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2494 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 43378 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 420 ಮಂದಿಗೆ ಸೋಂಕು ತಗುಲಿದೆ.152 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 21667 ಆಗಿದ್ದು, ಇಲ್ಲಿಯವರೆಗೆ 15946 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.5217 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 502 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 57 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 16034 ಆಗಿದ್ದು ,ಇಲ್ಲಿಯವರೆಗೆ 14395 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1496 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!