Wednesday, June 17, 2026
spot_imgspot_img
spot_imgspot_img

BIG BLAST:- ರಾಜ್ಯದಲ್ಲಿ ಇಂದು 10453 ಮಂದಿಗೆ ಕೊರೊನಾ ಸೋಂಕು..! ದಕ್ಷಿಣ ಕನ್ನಡದಲ್ಲಿ 362, ಉಡುಪಿ 319 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು  ಸೋಂಕಿತರ 136 ಸಾವು.

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 10453 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,136 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 592911 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 476378 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 4868 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 67 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2373 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 46610 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 362 ಮಂದಿಗೆ ಸೋಂಕು ತಗುಲಿದೆ.232 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 22706 ಆಗಿದ್ದು, ಇಲ್ಲಿಯವರೆಗೆ 16502 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.5678 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 524 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 319 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 17005 ಆಗಿದ್ದು ,ಇಲ್ಲಿಯವರೆಗೆ 14781 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2078 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!