Monday, June 15, 2026
spot_imgspot_img
spot_imgspot_img

BIG BLAST:- ರಾಜ್ಯದಲ್ಲಿ ಇಂದು 9319 ಮಂದಿಗೆ ಕೊರೊನಾ ಸೋಂಕು..!* ದಕ್ಷಿಣ ಕನ್ನಡದಲ್ಲಿ 326, ಉಡುಪಿ 217 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 95 ಸೋಂಕಿತರ ಸಾವು.

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 9319 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 95 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 398551 ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಈವರೆಗೆ 292873 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2824 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 38 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 4540 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 39725 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 326 ಮಂದಿಗೆ ಸೋಂಕು ತಗುಲಿದೆ. ಇಂದು ಒರ್ವ ಮಾತ್ರ ಕೊರೊನಾಗೆ ಬಲಿಯಾಗಿದ್ದಾರೆ. 202 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 14926 ಆಗಿದ್ದು, ಇಲ್ಲಿಯವರೆಗೆ 11441 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.3084 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 401 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 217 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 12735 ಆಗಿದ್ದು ,ಇಲ್ಲಿಯವರೆಗೆ 10631 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1993 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!