ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ . ಇಂದು ಒಂದೇ ದಿನ 5773 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,141 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 404324 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 300770 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2942 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 48 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2935 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 39669 ಮಂದಿಯಲ್ಲಿ ಪತ್ತೆಯಾಗಿದೆ.
ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 152 ಮಂದಿಗೆ ಸೋಂಕು ತಗುಲಿದೆ. ಇಂದು ಒರ್ವ ಮಾತ್ರ ಕೊರೊನಾಗೆ ಬಲಿಯಾಗಿದ್ದಾರೆ. 313 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 15078 ಆಗಿದ್ದು, ಇಲ್ಲಿಯವರೆಗೆ 11756 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2915 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 409 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ 113 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 12848 ಆಗಿದ್ದು ,ಇಲ್ಲಿಯವರೆಗೆ 10813 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1922 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.