Sunday, June 29, 2025
spot_imgspot_img
spot_imgspot_img

ರಾಜ್ಯದಲ್ಲಿ ಇಂದು 8191 ಮಂದಿಗೆ ಕೊರೊನಾ ಸೋಂಕು..! ದಕ್ಷಿಣ ಕನ್ನಡದಲ್ಲಿ 380, ಉಡುಪಿ 295 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 101 ಸೋಂಕಿತರ ಸಾವು.

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 8191 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,101 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 519537 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 413452 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 3322 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 32 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2970 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 41754 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 380 ಮಂದಿಗೆ ಸೋಂಕು ತಗುಲಿದೆ. ಇಂದು 6 ಮಂದಿ  ಕೊರೊನಾಗೆ ಬಲಿಯಾಗಿದ್ದಾರೆ. 353 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 20134 ಆಗಿದ್ದು, ಇಲ್ಲಿಯವರೆಗೆ 15101 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.4550 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 482 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 295 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 15401 ಆಗಿದ್ದು ,ಇಲ್ಲಿಯವರೆಗೆ 13700 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1562 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!