Saturday, June 28, 2025
spot_imgspot_img
spot_imgspot_img

ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು..! ದಕ್ಷಿಣ ಕನ್ನಡದಲ್ಲಿ 233, ಉಡುಪಿ 231 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 122 ಸೋಂಕಿತರ ಸಾವು.

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 7339 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,122 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 526876 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 423377 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2886 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 32 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 3536 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 41072 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 233 ಮಂದಿಗೆ ಸೋಂಕು ತಗುಲಿದೆ. ಇಂದು 8 ಮಂದಿ  ಕೊರೊನಾಗೆ ಬಲಿಯಾಗಿದ್ದಾರೆ. 404 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 20134 ಆಗಿದ್ದು, ಇಲ್ಲಿಯವರೆಗೆ 15507 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.4370 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 490 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 231 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 15632 ಆಗಿದ್ದು ,ಇಲ್ಲಿಯವರೆಗೆ 13978 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1511 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!