Thursday, April 25, 2024
spot_imgspot_img
spot_imgspot_img

ರಾಜ್ಯದಲ್ಲಿ ಇಂದು 8655 ಮಂದಿಗೆ ಕೊರೊನಾ ಸೋಂಕು..! ದಕ್ಷಿಣ ಕನ್ನಡದಲ್ಲಿ 217, ಉಡುಪಿ 63 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು  ಸೋಂಕಿತರ 86 ಸಾವು.

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 8655 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,86 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 557212 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 450302 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 4080 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 32 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2517 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 41816 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 217 ಮಂದಿಗೆ ಸೋಂಕು ತಗುಲಿದೆ. 68 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 21247 ಆಗಿದ್ದು, ಇಲ್ಲಿಯವರೆಗೆ 15794 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.4957 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 494 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 63 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 15977 ಆಗಿದ್ದು ,ಇಲ್ಲಿಯವರೆಗೆ 14279 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1555 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!