Friday, June 5, 2026
spot_imgspot_img
spot_imgspot_img

ರಾಜ್ಯದಲ್ಲಿ ಇಂದು 9543 ಮಂದಿಗೆ ಕೊರೊನಾ ಸೋಂಕು..! ದಕ್ಷಿಣ ಕನ್ನಡದಲ್ಲಿ 460, ಉಡುಪಿ 320 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು  ಸೋಂಕಿತರ 79 ಸಾವು.

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 9543 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,79 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 575566 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 462241 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 4217 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 15 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 3306 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 44274 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 460 ಮಂದಿಗೆ ಸೋಂಕು ತಗುಲಿದೆ.134 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 22127 ಆಗಿದ್ದು, ಇಲ್ಲಿಯವರೆಗೆ 16080 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.5537 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 508 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 320 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 16354 ಆಗಿದ್ದು ,ಇಲ್ಲಿಯವರೆಗೆ 14517 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1693 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!