Thursday, June 18, 2026
spot_imgspot_img
spot_imgspot_img

ರಾಜ್ಯದಲ್ಲಿ ಇಂದು 8865 ಮಂದಿಗೆ ಕೊರೊನಾ ಸೋಂಕು..!* ದಕ್ಷಿಣ ಕನ್ನಡದಲ್ಲಿ 316, ಉಡುಪಿ 228 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 104 ಸೋಂಕಿತರ ಸಾವು.

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 8865 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 104 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 370206 ಕ್ಕೆಏರಿಕೆಯಾಗಿದೆ.ರಾಜ್ಯದಲ್ಲಿ ಈವರೆಗೆ 268035 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 3189 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 29 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2631 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 40440 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 316ಮಂದಿಗೆ ಸೋಂಕು ತಗುಲಿದೆ. 3 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 208 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 13795 ಆಗಿದ್ದು, ಇಲ್ಲಿಯವರೆಗೆ 10706 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2705 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 384 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 228 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 12156 ಆಗಿದ್ದು ,ಇಲ್ಲಿಯವರೆಗೆ 9797 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2254 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!