Tuesday, April 30, 2024
spot_imgspot_img
spot_imgspot_img

ರಾಜ್ಯದಲ್ಲಿ ಇಂದು 9280 ಮಂದಿಗೆ ಕೊರೊನಾ ಸೋಂಕು..!* ದಕ್ಷಿಣ ಕನ್ನಡದಲ್ಲಿ 428, ಉಡುಪಿ 187 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 116 ಸೋಂಕಿತರ ಸಾವು.

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 9280 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 116 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 379486 ಕ್ಕೆಏರಿಕೆಯಾಗಿದೆ.ರಾಜ್ಯದಲ್ಲಿ    ಈವರೆಗೆ 274196 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2963 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 25 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 1732 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 41646 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:– ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 428 ಮಂದಿಗೆ ಸೋಂಕು ತಗುಲಿದೆ. 7 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 222 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 14223 ಆಗಿದ್ದು, ಇಲ್ಲಿಯವರೆಗೆ 10928 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2904 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 391 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 187 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 12343 ಆಗಿದ್ದು ,ಇಲ್ಲಿಯವರೆಗೆ 10129 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2107 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!