Wednesday, May 8, 2024
spot_imgspot_img
spot_imgspot_img

ರಾಜ್ಯದಲ್ಲಿ ಇಂದು 9217 ಮಂದಿಗೆ ಕೊರೊನಾ ಸೋಂಕು..!* ದಕ್ಷಿಣ ಕನ್ನಡದಲ್ಲಿ 350, ಉಡುಪಿ 227 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 129 ಸೋಂಕಿತರ ಸಾವು.

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 9217 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,129 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 430947 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 322454 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 3161 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 33 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 1672 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 43656 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 350 ಮಂದಿಗೆ ಸೋಂಕು ತಗುಲಿದೆ. ಇಂದು ಒರ್ವ ಮಾತ್ರ ಕೊರೊನಾಗೆ ಬಲಿಯಾಗಿದ್ದಾರೆ. 170 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 16112 ಆಗಿದ್ದು, ಇಲ್ಲಿಯವರೆಗೆ 12412 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.3273 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 427 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 227 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 13583 ಆಗಿದ್ದು ,ಇಲ್ಲಿಯವರೆಗೆ 11419 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2039 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!