Wednesday, July 22, 2026
spot_imgspot_img
spot_imgspot_img

ಮದ್ಯಪ್ರಿಯರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ: ಇಂದಿನಿಂದ ಮದ್ಯದ ದರ ಶೇ.20ರಷ್ಟು ಹೆಚ್ಚಳ

- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರ ಮದ್ಯಪ್ರಿಯರಿಗೆ ಶಾಕ್ ನೀಡಿದ್ದು, ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ 20% ತೆರಿಗೆ ಹೆಚ್ಚಿಸಿ, ಇಂದಿನಿಂದಲೇ ಹೊಸ ನೀತಿ ಜಾರಿಗೊಳಿಸಿದೆ.

ಆಲ್ಕೋಹಾಲ್ ಇನ್ ಬೇವರೇಜ್ ನೀತಿಯಿಂದ ದರ ಶೇ.20ರಿಂದ ಶೇ.30ರಷ್ಟು ಏರಿಕೆಯಾಗಿದೆ. ಈ ಹೊಸ ನೀತಿಯ ಪ್ರಕಾರ, ಮದ್ಯದ ಬಾಟಲ್‌ನಲ್ಲಿ ಇರುವ ಆಲ್ಕೋಹಾಲ್ ಅಂಶವನ್ನು ಆಧರಿಸಿ ತೆರಿಗೆ ನಿಗದಿಯಾಗಲಿದೆ. ಅಂದರೆ ಹೆಚ್ಚು ಆಲ್ಕೋಹಾಲ್ ಹೊಂದಿರುವ ಮದ್ಯಕ್ಕೆ ಹೆಚ್ಚಿನ ತೆರಿಗೆ, ಕಡಿಮೆ ಆಲ್ಕೋಹಾಲ್ ಇದ್ದರೆ ಕಡಿಮೆ ತೆರಿಗೆ ವಿಧಿಸಲಾಗುತ್ತದೆ.

ವಿಸ್ಕಿ, ರಮ್, ಬ್ರಾಂಡಿ ಮತ್ತು ಜಿನ್ ಸೇರಿದಂತೆ ಭಾರತೀಯ ಮದ್ಯದ ದರಗಳು ಶೇ.20ರಷ್ಟು ಏರಿಕೆಯಾಗಿದ್ದು, ಕರ್ನಾಟಕದಲ್ಲಿ 180 ಮಿಲಿ ಟೆಟ್ರಾ ಪ್ಯಾಕ್‌ಗಳ ವಿಸ್ಕಿ, ರಮ್, ಬ್ರಾಂಡಿ, ಜಿನ್ ಮತ್ತು ವೋಡ್ಕಾ ಬೆಲೆಯು ಕನಿಷ್ಠ ಶೇ.20ರಷ್ಟು ಹೆಚ್ಚಾಗಲಿದೆ.

ಕಡಿಮೆ ಆದಾಯ ವರ್ಗದವರು ಬಳಸುವ ಮೊದಲ 4 ಸ್ಲ್ಯಾಬ್‌ಗಳ ಮದ್ಯ ಹೆಚ್ಚು ದುಬಾರಿಯಾಗಿದ್ದು, ಸರಾಸರಿ ಆಲ್ಕೋಹಾಲ್ ಪ್ರಮಾಣ ಶೇ.42ರಷ್ಟಿದೆ. 4 ಸ್ಲ್ಯಾಬ್‌ಗಳು ಎಕ್ಸೈಸ್ ಆದಾಯದಲ್ಲಿ ಒಟ್ಟು ಶೇ.80ರಷ್ಟು ಪಾಲು ಹೊಂದಿದ್ದು, ಬಾರ್ ಅಂಡ್ ರೆಸ್ಟೋರೆಂಟ್‌ಗಳಲ್ಲಿ MRPಗಿಂತ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!