Tuesday, July 23, 2024
spot_imgspot_img
spot_imgspot_img

ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ರಾಜ್ಯ ಸರ್ಕಾರ ‘ಗ್ರೀನ್‌ ಸಿಗ್ನಲ್‌’

- Advertisement -G L Acharya panikkar
- Advertisement -

ಬೆಂಗಳೂರು: ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಅಂತ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಅವರು ಇಂದು ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಸಂಬಂಧಪಟ್ಟಂತೆ ನಡೆದ ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಇದೇ ವೇಳೇ ಅವರು ಪ್ರಣಾಳಿಕೆಯಲ್ಲಿ ಎಪಿಎಲ್‌,ಬಿಪಿಎಲ್‌ ಅಂತ ಹೇಳಿ ಇರಲಿಲ್ಲ, ಈ ನಿಟ್ಟಿನಲ್ಲಿ ‘ಕರ್ನಾಟಕದಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ ಅಂತ ಅವರು ಇದೇ ವೇಳೆ ತಿಳಿಸಿದರು. ಇನ್ನೂ ಇದೇ ವೇಳೆ ಅವರು ಮಾತನಾಡುತ್ತ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ ನಿನ್ನೆ ಸಿಎಂ ಸಿದ್ದರಾಮಯ್ಯನವರು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿಸಿದ ಅವರು ಇದೇ ವೇಳೆ ಈ ಬಗ್ಗೆ ಅಂತಿಮ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಅವರು ತೆಗೆದುಕೊಳ್ಳುತ್ತಾರೆ ಅಂತ ತಿಳಿಸಿದರು.

- Advertisement -

Related news

error: Content is protected !!