Saturday, April 20, 2024
spot_imgspot_img
spot_imgspot_img

ಪಚ್ಚನಾಡಿ ಭೂಕುಸಿತ – ರಾಜ್ಯ ಸರಕಾರದಿಂದ 14 ಕೋಟಿ ಬಿಡುಗಡೆ

- Advertisement -G L Acharya panikkar
- Advertisement -

ಮಂಗಳೂರು:- ಭಾರಿ ಮಳೆಯಿಂದಾಗಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಹಾಗೂ ಕುಡುಪು ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕದ ಸಮೀಪ ಭೂ ಕುಸಿತ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ.ವೇದವ್ಯಾಸ್ ಕಾಮತ್, ಡಾ ಭರತ್ ಶೆಟ್ಟಿಯವರ ಅವಿರತ ಶ್ರಮದ ಫಲವಾಗಿ ರಾಜ್ಯ ಸರಕಾರ 14 ಕೋಟಿ ಬಿಡುಗಡೆಗೊಳಿಸಿದೆ.

ಭೂ ಕುಸಿತ ಉಂಟಾಗಿರುವ ಪಚ್ಚನಾಡಿ, ಕುಡುಪು ಪ್ರದೇಶಗಳಿಗೆ ರಾಜ್ಯ ಸರಕಾರದ ನಗರಾಭಿವೃದ್ಧಿ ಇಲಾಖೆಯಿಂದ ಮಂಗಳೂರು ಮಹಾನಗರ ಪಾಲಿಕೆಗೆ ಬಿಡುಗಡೆಗೊಳಿಸಲಾಗಿದೆ.

ಈ ಹಿಂದೆ ಮಂಗಳೂರು ಮಹಾನಗರ ಪಾಲಿಕೆಯ ಪಚ್ಚನಾಡಿ, ಕುಡುಪು ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಉಂಟಾದ ಭೂ ಕುಸಿತದಿಂದ ಹಾನಿಗೊಳಗಾಗಿರುವ ಸಂತೃಪ್ತರಿಗೆ ಅಂದಾಜು 20 ಕೋಟಿ ಪರಿಹಾರ ಪಾವತಿಸುವಂತೆ ಸರಕಾರಕ್ಕೆ ವಿಶೇಷ ಮನವಿಯನ್ನು ಸಂಸದರು ಹಾಗೂ ಶಾಸಕರುಗಳು ವಿಶೇಷ ಮನವಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಎಸ್.ಎಫ್.ಸಿ 2019-20ನೇ ಸಾಲಿನ ವಿಶೇಷ ಅನುದಾನದಿಂದ 14 ಕೋಟಿ ಬಿಡುಗಡೆಗೊಳಿಸಿದೆ. ಈ ಹಿಂದೆಯೇ ರಾಜ್ಯ ಸರಕಾರವು 8 ಕೋಟಿ ಅನುದಾನ ಬಿಡುಗಡೆಗೊಳಿಸಿತ್ತು. ಅದರ ಮುಂದಿನ ಹಂತವಾಗಿ 14 ಕೋಟಿ ಅನುದಾನವನ್ನು ಈಗ ಬಿಡುಗಡೆಗೊಳಿಸಿದೆ. ಅದಕ್ಕಾಗಿ ಮಾನ್ಯ ಮುಖ್ಯಮಂತ್ರಿಗಳು, ನಗರಾಭಿವೃದ್ಧಿ ಸಚಿವರು, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಭರತ್ ಶೆಟ್ಟಿಯವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

- Advertisement -

Related news

error: Content is protected !!