ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಬೆಂಗಳೂರು: ರಾಜ್ಯದಲ್ಲಿ ವರುಣ ಅಬ್ಬರಿಸಿ ಬೊಬ್ಬಿರುತ್ತಿದ್ದಾನೆ. ಇಲ್ಲಿಯವೆರೆಗೆ ಮಳೆಯಿಂದಾಗಿ ರಾಜ್ಯದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಮಹಾಮಳೆಗೆ 28 ಮನೆಗಳು ಸಂಪೂರ್ಣ ಹಾನಿಯಾಗಿದ್ದು, 2,140 ಮನೆಗಳಿಗೆ ಬಹುತೇಕ ಹಾನಿಯಾಗಿವೆ. ರಾಜ್ಯದ ಹಲವೆಡೆ 80 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 1600 ಮಂದಿ ಆಶ್ರಯಪಡೆಯುತ್ತಿದ್ದಾರೆ.
ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್:
ಮುಂದಿನ 24 ಗಂಟೆಗಳಲ್ಲಿ ರಾಜ್ಯ 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿರುವ ಹಿನ್ನಲೆಯಲ್ಲಿ ರಾಜ್ಯ ನೈಸರ್ಗಿಕ ವಿಪತ್ತು, ನಿವರ್ಹಣಾ ಕೇಂದ್ರ ರೆಡ್ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರಕನ್ನಡ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಕರಾವಳಿ ಭಾಗಗಳಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ. ಆಗಸ್ಟ್ 11 ರಂದು ಕರಾವಳಿಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಸಾಧ್ಯತೆಯಿದೆ. ಹೀಗಾಗಿ ಆ.12ರಂದು ಆರೆಂಜ್ ಅಲರ್ಟ್ ಹಾಗೂ ಆಗಸ್ಟ್ 13ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.