


ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛಾಟಿತ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಸೇರಿ ಮೂವರಿಗೆ ಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಇಂದು ಅರ್ಜಿ ವಿಚಾರಣೆ 66ನೇ ಸೇಷನ್ಸ್ ಕೋರ್ಟ್ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, ಕೃಪಾ ಆಳ್ವಾ, ವಿನೋದ್ ಕುಮಾರ್, ಪ್ರಶಾಂತ್ ಕುಮಾರ್ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶಿಸಿದೆ.
ಅಲ್ಲದೇ, ತನಿಖಾಧಿಕಾರಿಗಳು ತನಿಖೆಗೆ ಕರೆದಾಗ ಅರ್ಜಿದಾರರು ಸಹಕರಿಸಬೇಕು. ಸಾಕ್ಷಿಗಳಿಗೆ ಯಾವುದೇ ರೀತಿಯ ಬೆದರಿಕೆ ಅಥವಾ ಪ್ರಭಾವ ಬೀರುವಂತಿಲ್ಲ ಎಂದು ಷರತ್ತು ವಿಧಿಸಿದೆ.
ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆ ಕಾಂಗ್ರೆಸ್ ಕೃಪಾ ಆಳ್ವಾ ಅವರನ್ನ ಇತ್ತೀಚೆಗಷ್ಟೇ ಉಚ್ಚಾಟನೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಿದ ಹೊರತಾಗಿಯೂ ಪ್ರತಿಕ್ರಿಯಿಸಿರಲಿಲ್ಲ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರ ಸೂಚನೆ ಮೇರೆಗೆ ಕೃಪಾ ಆಳ್ವಾ ಅವರನ್ನ ಕಾಂಗ್ರೆಸ್ನಿಂದ ಉಚ್ಚಾಟನೆ ಮಾಡಲಾಗಿತ್ತು ಎಂದು ತಿಳಿದುಬಂದಿದೆ.








