Monday, March 24, 2025
spot_imgspot_img
spot_imgspot_img

ಸುರತ್ಕಲ್ : ಕಾಟಿಪಳ್ಳ ಬದ್ರಿಯಾ ಜುಮಾ ಮಸೀದಿಗೆ ಕಲ್ಲು ತೂರಾಟ

- Advertisement -
- Advertisement -

ಸುರತ್ಕಲ್: ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ಅಪರಿಚಿತರು ಕಲ್ಲು ತೂರಾಟ ನಡೆಸಿದ ಘಟನೆ ಸೆ.15 ರವಿವಾರ ರಾತ್ರಿ 11ಗಂಟೆ ಸುಮಾರಿಗೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ ಎಂದು ತಿಳಿದು ಬಂದಿದೆ.

ಕಿಡಿಗೇಡಿಗಳ ಕಲ್ಲೆಸೆತದಿಂದ ಬದ್ರಿಯಾ ಮಸೀದಿಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಈ ಕೃತ್ಯವನ್ನು ಎರಡು ಬೈಕ್ ನಲ್ಲಿ ಬಂದ ನಾಲ್ವರು ಕಿಡಿಗೇಡಿಗಳು ಎಸಗಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ದೃಶ್ಯಾವಳಿ ಮಸೀದಿ ಬಳಿಯಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸುರತ್ಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಮಸೀದಿಯ ಸಿಸಿಟಿವಿ ಸೇರಿದಂತೆ ಸಮೀಪದ ಸಿಸಿಟಿವಿ ಫೂಟೇಜ್ ವಶಕ್ಕೆ ಪಡೆದುಕೊಂಡು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಈದ್ ಮಿಲಾದ್ ಪ್ರಯುಕ್ತ ಹಲವು ಭಾಗಗಳಲ್ಲಿ ನಾಳೆ ಮೆರವಣಿಗೆ ಇರುವುದರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.

- Advertisement -

Related news

error: Content is protected !!