Wednesday, May 8, 2024
spot_imgspot_img
spot_imgspot_img

ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ; ಉದ್ವಿಗ್ನ ಪರಿಸ್ಥಿತಿ, 144 ಸೆಕ್ಷನ್ ಜಾರಿ

- Advertisement -G L Acharya panikkar
- Advertisement -

ಈದ್ ಮಿಲಾದ್ ಮೆರವಣಿಗೆ ವೇಳೆ ಘರ್ಷಣೆಯಾಗಿ ಕಲ್ಲು ತೂರಾಟ ಮಾಡಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಗುಂಪನ್ನು ಚದುರಿಸಿ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದ್ದಾರೆ.

ಮೆರವಣಿಗೆ ವೇಳೆ ಎರಡು ಕೋಮುಗಳಿಂದ ಪರಸ್ಪರ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಎಸ್​ಪಿ ಜಿ.ಕೆ ಮಿಥುನ್ ಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾಇನ್ನು ಈದ್ ಮಿಲಾದ್ ಹಬ್ಬ ಆಚರಣೆ ವೇಳೆ ಕಲ್ಲೆಸೆತ ಉಂಟಾದ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ಶಿವಮೊಗ್ಗದ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್‌ ಜಾರಿಗೆ ಆದೇಶಿಸಿದ್ದಾರೆ.

ಘರ್ಷಣೆ ಸಂಭವಿಸುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದಾರೆ. ಕಿಡಿಗೇಡಿಗಳನ್ನು ನಿಯಂತ್ರಿಸಲು ಯತ್ನಿಸಿದ್ದಾರೆ. 2 ಗುಂಪಿನ ನಡುವೆ ನಡೆದ ಕಲ್ಲು ತೂರಾಟದಲ್ಲಿ 6 ಮಂದಿ ಗಾಯಗೊಂಡಿದ್ದಾರೆ. 7 ಮನೆ, 1 ಕಾರು, 1 ಬೈಕ್ ಜಖಂಗೊಂಡಿವೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಹಲವಾರು ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈದ್ ಮಿಲಾದ್ ಹಬ್ಬದ ಅಂಗವಾಗಿ ಶಿವಮೊಗ್ಗದಲ್ಲಿ ಮುಸ್ಲಿಂ ಬಾಂಧವರು ಮೆರವಣಿಗೆ ಹಮ್ಮಿಕೊಂಡಿದ್ದರು. ಕಳೆದ 28ನೇ ದಿನದಂದು ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆ ಇದ್ದಿದ್ದರಿಂದ, ಈದ್ ಮಿಲಾದ್ ಮೆರವಣಿಗೆಯನ್ನು ನಿನ್ನೆಗೆ (ಭಾನುವಾರ) ಮುಸ್ಲಿಂ ಮುಖಂಡರು ಹಮ್ಮಿಕೊಂಡಿದ್ದರು. ಹೀಗಾಗಿ ಈದ್ ಮಿಲಾದ್ ಮೆರವಣಿಗೆಗೆ ಇಡೀ ಶಿವಮೊಗ್ಗ ನಗರವನ್ನು ಹಸಿರುಮಯ ಮಾಡಲಾಗಿತ್ತು. ಹಸಿರು ಬಾವುಟ, ಟಿಪ್ಪು ಸುಲ್ತಾನ್, ಔರಂಗಜೇಬ್ ಕಟೌಟ್ ಹಾಕಿದ್ದರು. ಈದ್ ಮಿಲಾದ್ ಹಬ್ಬದ ಅಂಗವಾಗಿ ಶಿವಮೊಗ್ಗದಲ್ಲಿ ಮುಸ್ಲಿಂ ಬಾಂಧವರು ಮೆರವಣಿಗೆ ಹಮ್ಮಿಕೊಂಡಿದ್ದರು. ಕಳೆದ 28ನೇ ದಿನದಂದು ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆ ಇದ್ದಿದ್ದರಿಂದ, ಈದ್ ಮಿಲಾದ್ ಮೆರವಣಿಗೆಯನ್ನು ನಿನ್ನೆಗೆ (ಭಾನುವಾರ) ಮುಸ್ಲಿಂ ಮುಖಂಡರು ಹಮ್ಮಿಕೊಂಡಿದ್ದರು.

ಹಸಿರು ಬಾವುಟ, ಟಿಪ್ಪು ಸುಲ್ತಾನ್, ಔರಂಗಜೇಬ್ ಕಟೌಟ್ ಹಾಕಿದ್ದರು.ಭಾನುವಾರ ಮುಂಜಾನೆ ಕೂಡ ರಾಗಿಗುಡ್ಡದಲ್ಲಿ ಗೊಂದಲ ಉಂಟಾಗಿತ್ತು. ರಾಗಿಗುಡ್ಡದ ವೃತ್ತವೊಂದರಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಹಾಕಿದ್ದರು. ಟಿಪ್ಪು ಸುಲ್ತಾನ್ ಇಬ್ಬರು ಹಿಂದೂ ಮಾದರಿಯ ಸೈನಿಕರನ್ನು ತುಳಿಯುತ್ತಿರುವ ರೀತಿ ಕಟೌಟ್ ಹಾಕಿದ್ದರು. ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಬಣ್ಣ ಹಚ್ಚಿ ಮುಚ್ಚಿದ್ದರು. ಇದಕ್ಕೆ ಮುಸ್ಲಿಮರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದರು. ನಂತರ ಸ್ಥಳಕ್ಕೆ ಎಸ್‌ಪಿ ಮಿಥುನ್ ಕುಮಾರ್ ಭೇಟಿ ನೀಡಿ ಮನವೊಲಿಸಿದ್ದರು.

ರಾಗಿಗುಡ್ಡದಿಂದ ಗಾಂಧಿ ಬಜಾರಿಗೆ ಮೆರವಣಿಗೆ ತೆರಳುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ. ಪ್ರತಿಯಾಗಿ ಮೆರವಣಿಗೆಯಲ್ಲಿ ಇದ್ದವರು ಕಲ್ಲು ತೂರಾಟ ನಡೆಸಿದರು. ಸದ್ಯ ಕಲ್ಲು ತೂರಾಟ ನಡೆಸಿದವರ ಪತ್ತೆ ಹಚ್ಚಿ ಮನೆ ಮನೆಗೆ ತೆರಳಿ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪತ್ತೆಗೆ ಎಸ್‌ಪಿ 3 ವಿಶೇಷ ತಂಡ ರಚನೆ ಮಾಡಲಾಗಿದೆ. ಸದ್ಯ ಗಲಭೆ ನಡೆದ ಸ್ಥಳದಲ್ಲಿ ಆರ್‌ಎಎಫ್, ಡಿಎಆರ್, ಕೆಎಸ್‌ಆರ್‌ಪಿ ತುಕಡಿ ಸೇರಿದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

- Advertisement -

Related news

error: Content is protected !!