Saturday, June 6, 2026
spot_imgspot_img
spot_imgspot_img

ಡಿ.ಕೆ.ಶಿ ಬೆಂಬಲಿಗರು ತೆರಳುತ್ತಿದ್ದ ವಾಹನಗಳ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಕಲ್ಲು ತೂರಾಟ

- Advertisement -
- Advertisement -

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ರಾಜಕೀಯ ಬೆಂಬಲಿಗರ ನಡುವೆ ಗದ್ದಲ ಉಂಟಾಗಿದೆ. ವಿಮಾನ ನಿಲ್ದಾಣದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಬಲಿಗರು ತೆರಳುತ್ತಿದ್ದ ವೇಳೆ ವಾಹನಗಳ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಕಲ್ಲು ತೂರಿದ್ದಾರೆ ಎನ್ನಲಾಗಿದೆ.

ಡಿಕೆಶಿ ಆಗಮನದ ಸುದ್ದಿ ತಿಳಿದು ಮೊದಲೇ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ ಬೆಂಬಲಿಗರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ರಮೇಶ್ ಬೆಂಬಲಿಗರು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

ವಿಮಾನನಿಲ್ದಾಣದಿಂದ ಡಿ.ಕೆ. ಶಿವಕುಮಾರ್ ತಮ್ಮ ಬೆಂಬಲಿಗರ ಜೊತೆ ವಾಹನದಲ್ಲಿ ತೆರಳುವಾಗ ಅವರ ಬೆಂಬಲಿಗರ ವಾಹನದ ಮೇಲೆ ಚಪ್ಪಲಿ, ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಡಿಕೆಶಿ ಅವರ ಬೆಂಬಲಿಗರ ವಾಹನಗಳನ್ನು ತಡೆಯಲು ರಮೇಶ್ ಬೆಂಬಲಿಗರು ಮುಂದಾಗಿದ್ದು, ಪೊಲೀಸರು ಅವಕಾಶ ನೀಡಿದ್ದಾಗ ಕಲ್ಲು ತೂರಿದ್ದಾರೆ. ಈ ವೇಳೆ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಕಾರ್ಯಕರ್ತನ ಮೇಲೆ ಲಾಠಿ ಬೀಸಿದ ಪೊಲೀಸರ ವಿರುದ್ಧ ರಮೇಶ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!