ಬೆಂಗಳೂರು: ಕರ್ನಾಟಕ ರಾಜ್ಯದ ದಕ್ಷಿಣ ಒಳನಾಡು ವ್ಯಾಪ್ತಿಯಲ್ಲಿ ಚಂಡಮಾರುತ ಸೈಕ್ಲೋನ್‌ನಿಂದ ಅತೀವ ಮಳೆಯಾಗಿದೆ. ಇದರಿಂದ ರಾಮನಗರ ಜಿಲ್ಲೆ ಒಂದರಲ್ಲಿ ರೈತರು ಬೆಳೆದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.
ಇದು ಕಟಾವು ಯಂತ್ರ ಬಾಡಿಗೆ ಹೆಸರಿನಲ್ಲಿ ನಡೆಯುತ್ತಿರುವ ಸುಲಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ವಿವರಿಸಿದ್ದಾರೆ.ಫೆಂಗಲ್ ಚಂಡಮಾರುತದಿಂದಾಗಿ ರಾಮನಗರ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದ 70,000 ಎಕರೆ ಪ್ರದೇಶದಲ್ಲಿ ಭತ್ತ, ರಾಗಿ ಬೆಳೆಗಳು ನೆಲಕಚ್ಚಿವೆ. ಹುಲ್ಲು ಕೊಳೆತು ಜಾನುವಾರುಗಳ ಮೇವಿಗೂ ಕೊರತೆಯಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ, ನಿಮ್ಮ ಸ್ವಾಭಿಮಾನಿ, ಜನಕಲ್ಯಾಣ ಸಮಾವೇಶದ ಕಿತ್ತಾಟದ ಮಧ್ಯದಲ್ಲಿ ಬಿಡುವು ಮಾಡಿಕೊಂಡು ಒಮ್ಮೆ ರಾಮನಗರ ಜಿಲ್ಲೆಗೆ ಭೇಟಿ ನೀಡಬೇಕು. ಇಲ್ಲಿನ ರೈತರು ಭಾರೀ ಮಳೆಗೆ ಎದುರಿಸಿರುವ ಕಷ್ಟ ಕೇಳಿ. ಕುಂದು ಕೊರತೆ ಆಲಿಸಿ, ಬೆಳೆ ನಷ್ಟ ಪರಿಹಾರ ಕೊಡಿಸುವ ಮೂಲಕ ಅನ್ನದಾತರ ನೆರವಿಗೆ ಬರಬೇಕು ಎಂದು ಸರ್ಕಾರಕ್ಕೆ ಅವರು ಆಗ್ರಹಿಸಿದರು.ನೆಲಕಚ್ಚಿದ ಭತ್ತ ಮತ್ತು ರಾಗಿ ಬೆಳೆ: ರೈತರು ಕಣ್ಣೀರುಬಂಗಾಳಕೊಲ್ಲಿಯಲ್ಲಿ ಉಂಟಾಗಿ ಕರಾವಳಿಗೆ ಅಪ್ಪಳಿಸಿದ ಚಂಡಮಾರುತದಿಂದ ರಾಮನಗರ ಇತರ ಕಡೆಗಳಲ್ಲಿ ಭಾರೀ ಮಳೆ ಆಗಿದೆ. ಈ ಅಕಾಲಿಕ ಮಳೆಯಿಂದಾಗಿ ಸಾವಿರಾರು ಎಕರೆ ಪ್ರದೇಶದಲ್ಲಿ ಭತ್ತ ಮತ್ತು ರಾಗಿ ಬೆಳೆ ನೆಲಕಚ್ಚಿ ಈಗಾಗಲೇ ಹೈರಾಣಾಗಿರುವ ರೈತರಿಗೆ, ಕಟಾವು ಯಂತ್ರ ಬಾಡಿಗೆ ಹೆಸರಿನಲ್ಲಿ ನಡೆಯುತ್ತಿರುವ ಸುಲಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಅವರು ಪುನರುಚ್ಚರಿಸಿದರು.