Sunday, July 6, 2025
spot_imgspot_img
spot_imgspot_img

ಮೂಡಬಿದಿರೆ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಮೂಡಬಿದಿರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಮೃತರನ್ನು ಮೈಸೂರಿನ ಸಿಎಂ ದಿವ್ಯಾ (18) ಎಂದು ಗುರುತಿಸಲಾಗಿದೆ.

ದಿವ್ಯಾ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ನೀಟ್ ಪರೀಕ್ಷೆಯಲ್ಲಿ ಅಂಕ ಬರುವುದಿಲ್ಲ ಎಂಬ ಭಯದಲ್ಲಿದ್ದಳು ಎಂದು ಬಾಲಕಿಯ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ದಿವ್ಯಾ ಭಾನುವಾರ ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ, ಶನಿವಾರ ತಡರಾತ್ರಿಯೇ ಹಾಸ್ಟೆಲ್ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ . ಈ ಬಗ್ಗೆ ಪೋಷಕರು ಮೂಡಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ

- Advertisement -

Related news

error: Content is protected !!