- Advertisement -
- Advertisement -

ರಾಯಚೂರು: ಡೆತ್ನೋಟ್ ಬರೆದಿಟ್ಟು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಸಿರವಾರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ವೆಂಕಟೇಶ್ ನಾಯಕ್ (20) ಎಂದು ಗುರುತಿಸಲಾಗಿದೆ.
ಈತ ಧಾರವಾಡದಲ್ಲಿ ಬಿಎ ಪದವಿ ವ್ಯಾಸಂಗ ಮಾಡುತ್ತಿದ್ದು, ಇತ್ತೀಚಿಗೆ ಊರಿಗೆ ಬಂದಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನನ್ನ ಸಾವಿಗೆ ಯಾರೂ ಜವಾಬ್ದಾರರಲ್ಲ, ಹೊಣೆಗಾರರಲ್ಲ ಎಂದು ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾನೆ.
ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕುಟುಂಬಸ್ಥರು ತಮ್ಮದೇ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮನೆಯಲ್ಲಿ ಒಬ್ಬನೇ ಉಳಿದಿದ್ದ ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಬಗ್ಗೆ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -