Saturday, June 28, 2025
spot_imgspot_img
spot_imgspot_img

ಹಾಸ್ಟೆಲ್‌ನ 5ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!

- Advertisement -
- Advertisement -

ಲಕ್ನೋ: ಹುಟ್ಟುಹಬ್ಬದ ಮುನ್ನಾ ದಿನವೇ ಅಲಹಾಬಾದ್‌ನ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ (IIIT) ಪ್ರಥಮ ವರ್ಷದ ವಿಶೇಷಚೇತನ ವಿದ್ಯಾರ್ಥಿ ಹಾಸ್ಟೆಲ್‌ನ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ತೆಲಂಗಾಣದ ವಿಶೇಷಚೇತನ ವಿದ್ಯಾರ್ಥಿ ರಾಹುಲ್ ಮದಲ ಚೈತನ್ಯ ಎಂದು ಗುರುತಿಸಲಾಗಿದೆ.

ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ರಾಹುಲ್ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ನಂತರ ಬೇಸರಗೊಂಡಿದ್ದ ಎಂದು ತಿಳಿದುಬಂದಿದೆ. ಘಟನೆಯ ತನಿಖೆಗಾಗಿ ಸಮಿತಿಯನ್ನು ರಚಿಸಲಾಗಿದೆ ಮತ್ತು ಏಳು ದಿನಗಳಲ್ಲಿ ವರದಿಯನ್ನು ಸಲ್ಲಿಸಲು ನಿರ್ದೇಶಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಪೊಲೀಸರ ಪ್ರಕಾರ, ಶನಿವಾರ ರಾತ್ರಿ 11:55ರ ಸುಮಾರಿಗೆ ರಾಹುಲ್ ಐಐಐಟಿ ಕ್ಯಾಂಪಸ್‌ನಲ್ಲಿರುವ ತನ್ನ ಹಾಸ್ಟೆಲ್‌ನ ಐದನೇ ಮಹಡಿಯಿಂದ ಹಾರಿದ್ದಾನೆ. ಮಾಹಿತಿ ದೊರೆತ ತಕ್ಷಣವೇ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ರಾಹುಲ್‌ನನ್ನು ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಆಸ್ಪತ್ರೆಯಲ್ಲಿ ರಾಹುಲ್ ಕೊನೆಯುಸಿರೆಳೆದಿದ್ದಾನೆ ಎಂದು ಧೂಮಂಗಂಜ್ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಅಜೇಂದ್ರ ಯಾದವ್ ಹೇಳಿದ್ದಾರೆ.

- Advertisement -

Related news

error: Content is protected !!