Sunday, May 5, 2024
spot_imgspot_img
spot_imgspot_img

ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ..!

- Advertisement -G L Acharya panikkar
- Advertisement -

ಎದೆ ಭಾಗಕ್ಕೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಭವಾನಿನಗರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಿಇ ಪ್ರಥಮ ವರ್ಷದ ವಿದ್ಯಾರ್ಥಿ ವಿಶು ಉತ್ತಪ್ಪ (19) ಎಂದು ಗುರುತಿಸಲಾಗಿದೆ.

ಕೊಡಗು ಮೂಲದ ತಮ್ಮಯ್ಯ ಎಂಬವರು ನೈಸ್​ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿ ಆಗಿದ್ದು, ಕಳೆದ 15 ವರ್ಷದಿಂದ ಮಾದನಾಯಕನಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ಭವಾನಿನಗರದಲ್ಲಿ ಕುಟುಂಬ ಸಹಿತ ವಾಸವಿದ್ದರು.ತಂದೆ ರೇಷನ್​ ತರಲು ಹೋದಾಗ ವಿಶು ಗನ್​​​ನಿಂದ​ ಫೈಯರ್​ ಮಾಡಿಕೊಂಡು ತಂದೆಗೆ ಕರೆ ಮಾಡಿದ್ದಾನೆ. ನಾನು ಇನ್ನು ಮುಂದೆ ತಪ್ಪು ಮಾಡುವುದಿಲ್ಲ ಎಂದು ಹೇಳಿದ್ದಾನೆ. ಗಾಬರಿಗೊಂಡ ತಂದೆ ಮನೆಗೆ ದೌಡಾಯಿಸಿ ಬಂದು ನೋಡಿದಾಗ ವಿಶು ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

- Advertisement -

Related news

error: Content is protected !!