Friday, July 11, 2025
spot_imgspot_img
spot_imgspot_img

ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ..!

- Advertisement -
- Advertisement -

ಕೊಡಗು: ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪೊನ್ನಂಪೇಟೆ ಹಳ್ಳಿಗಟ್ಟು ಸಿಇ.ಟಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿಯನ್ನು ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಎಂದು ಗುರುತಿಸಲಾಗಿದೆ.

ತೇಜಸ್ವಿನಿ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಆಕೆ, ಅಂದಿನ ಕಾರ್ಯಕ್ರಮಕ್ಕೆ ಬಾರದವರಿಗೆ ನಿನ್ನೆ ಸಿಹಿ ಹಂಚಿದ್ದಳು. ತರಗತಿಗೆ ಆಗಮಿಸಿದ ನಂತರ ಸಂಜೆ 4 ಗಂಟೆಗೆ ಹಾಸ್ಟೆಲ್ ಸೇರಿಕೊಂಡಿದ್ದಾಳೆ ಎಂದು ಹೇಳಲಾಗಿದೆ.

ಪೊನ್ನಂಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. 4.30 ಗಂಟೆಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಬಾಗಿಲು ಒಳಗಿನಿಂದ ಹಾಕಿಕೊಂಡಿದ್ದಳು. ಎಷ್ಟೇ ಕೂಗಿದರು ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ನಂತರ ಪರಿಶೀಲಿಸಿದಾಗ ಡೆತ್ ನೋಟ್ ಪತ್ತೆಯಾಗಿ ಆರು ವಿಷಯಗಳಲ್ಲಿ ಬ್ಯಾಕ್ ಲಾಗ್ ಇರುವ ಕಾರಣ, ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾಳೆ ಎನ್ನಲಾಗಿದೆ.

- Advertisement -

Related news

error: Content is protected !!