Sunday, June 21, 2026
spot_imgspot_img
spot_imgspot_img

ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು..!!

- Advertisement -
- Advertisement -
vtv vitla

ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಬಲ್ನಾಡು ಬಂಗಾರಡ್ಕ ದಿ.ಕಮಲಾಕ್ಷ ಅವರ ಪುತ್ರಿ ವಂಶಿ ಬಿ.ಕೆ (17) ಮೃತಪಟ್ಟ ವಿದ್ಯಾರ್ಥಿನಿ.

ಎಸ್.ಎಸ್.ಎಲ್.ಸಿ ಮುಗಿಸಿ ಮುಂದೆ ಪಿಯುಸಿ ಓದಲು ಕಾಲೇಜು ಸೇರುವ ಸಿದ್ಧತೆಯಲ್ಲಿದ್ದರು.ಈ ನಡುವೆ ಅವರು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿಂದ ಚೇತರಿಸಿಕೊಂಡು ಮನೆಗೆ ಹೋಗಿದ್ದರು. ಈ ನಡುವೆ ಮತ್ತೆ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

- Advertisement -

Related news

error: Content is protected !!