Friday, June 5, 2026
spot_imgspot_img
spot_imgspot_img

ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು

- Advertisement -
- Advertisement -

ತೆಲಂಗಾಣ : ಶಾಲಾ ವಿದ್ಯಾರ್ಥಿಯೋರ್ವ ಆಟದ ಮೈದಾನದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಮೃತ ಬಾಲಕನನ್ನು ಜಯಂತ್ (15) ಎಂದು ಗುರುತಿಸಲಾಗಿದೆ.

ಜಯಂತ್ ಹನುಮಕೊಂಡದ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದ. ಮೈದಾನದಲ್ಲಿ ಆಟವಾಡುತ್ತಿದ್ದ ವೇಳೆ ಜಯಂತ್ ಏಕಾಏಕಿ ಕುಸಿದು ಬಿದ್ದಿದ್ದಾನೆ. ಆತನ ಮೂಗು ಮತ್ತು ಕಿವಿಯಿಂದ ರಕ್ತ ಬಂದಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!