Thursday, June 4, 2026
spot_imgspot_img
spot_imgspot_img

ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿ ಮೃತ್ಯು

- Advertisement -
- Advertisement -

ಬಿಸಿಯೂಟದ ಸಾಂಬಾರ್ ಪಾತ್ರೆಯಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ.

ಕಲಬುರಗಿಯ ಚಿಣಮಗೇರಾ ಗ್ರಾಮದ ಸರ್ಕಾರಿ ಶಾಲೆಯ ಮಹಾಂತಮ್ಮ (8) ಮೃತ ವಿದ್ಯಾರ್ಥಿನಿ. ನವೆಂಬರ್ 16 ರಂದು ಶಾಲೆಯಲ್ಲಿ ಬಿಸಿಯೂಟದ ಸಾಂಬಾರ್ ಪಾತ್ರೆಯಲ್ಲಿ ವಿದ್ಯಾರ್ಥಿನಿ ಬಿದ್ದಿದ್ದಳು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದರಿಂದ ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿತ್ತು.

ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಬರಲಾಗಿತ್ತು. ಆದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ. ಶಾಲೆಯಲ್ಲಿ ಶಿಕ್ಷಕರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮುಖ್ಯಶಿಕ್ಷಕ ಸೇರಿದಂತೆ ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು.

- Advertisement -

Related news

error: Content is protected !!