- Advertisement -
- Advertisement -




ತುಮಕೂರು: 10ನೇ ತರಗತಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ರಾಹುಲ್ (16) ಎಂದು ಗುರುತಿಸಲಾಗಿದೆ.
ಭೈರಾಪುರ ಗ್ರಾಮದ ಜಯರಾಂ ಪುತ್ರ ರಾಹುಲ್ ಚಿಕ್ಕನಾಯಕನಹಳ್ಳಿ ಪಟ್ಟಣದ ಜಿಎಚ್‌ಎಸ್‌ನಲ್ಲಿ ಹತ್ತನೇ ತರಗತಿ ಓದುತ್ತಿದ್ದ. ಶುಕ್ರವಾರ ಶಾಲೆಗೆ ಹೋಗಿ ಮನೆಗೆ ವಾಪಸ್ ಬಂದಿದ್ದ ರಾಹುಲ್‌ಗೆ ರಾತ್ರಿ 9:30ರ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ರಾಹುಲ್‌ನನ್ನು ಪೋಷಕರು ಹುಳಿಯಾರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ರಾಹುಲ್ ಕೊನೆಯುಸಿರೆಳೆದಿದ್ದಾನೆ.
- Advertisement -