Sunday, June 14, 2026
spot_imgspot_img
spot_imgspot_img

ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿಗೆ ಹೃದಯಾಘಾತ

- Advertisement -
- Advertisement -

ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ
ಜಿಲ್ಲೆಯ ಜಮಖಂಡಿ ತಾಲೂಕಿನ ಇನಾಮ ಹಂಚಿನಾಳ ಗ್ರಾಮದಲ್ಲಿ ಘಟನೆ ನಡೆದಿದೆ.

ಹುಲ್ಯಾಳ ಗ್ರಾಮದ ರಾಹುಲ್ ಇಲ್ಲಿನ ಶ್ರೀಗುರು ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿ ರಾಹುಲ್ ಕೋಲಕಾರ (15) ಎಂದಿನಂತೆ ಶಾಲೆಗೆ ತೆರಳಿದ್ದು, ಪರೀಕ್ಷೆ ಬರೆಯುತ್ತಿದ್ದಾಗಲೇ ವಿದ್ಯಾರ್ಥಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಆತನನ್ನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾನೆ.ವಿದ್ಯಾರ್ಥಿಗೆ ಮೊದಲೇ ಹೃದಯ ಸಂಬಂಧಿ ಕಾಯಿಲೆ ಇತ್ತೆಂದು ಹೇಳಲಾಗುತ್ತಿದೆ.

- Advertisement -

Related news

error: Content is protected !!