Wednesday, July 22, 2026
spot_imgspot_img
spot_imgspot_img

ಶಾಲೆಯಲ್ಲಿ ಸಾಂಬಾರ್​ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ

- Advertisement -
- Advertisement -

ಬಿಸಿಯೂಟದ ಸಾಂಬರ್​ ಪಾತ್ರೆಗೆ ವಿದ್ಯಾರ್ಥಿನಿ ಬಿದ್ದ ಪರಿಣಾಮ ಗಂಭೀರ ಗಾಯಗಳಾಗಿರುವಂತಹ ಘಟನೆ ಕಲುಬುರುಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರಿಯಲ್ಲಿ ನಡೆದಿದೆ.

ಸರ್ಕಾರಿ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಮಹಂತಮ್ಮಗೆ ಗಾಯಗಳಾಗಿದ್ದು, ಸದ್ಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಲೆಯಲ್ಲಿ ಮಧ್ಯಾಹ್ನ ಬಿಸಿ ಊಟ ತಯಾರು ಮಾಡುವಾಗ ದುರ್ಘಟನೆ ಸಂಭವಿಸಿದೆ. ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯದ ಪರಿಣಾಮದಿಂದಲೇ ಬಾಲಕಿ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದಾಳೆಂದು ಪೋಷಕರು ಆರೋಪ ಮಾಡುತ್ತಿದ್ದಾರೆ.

ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!