Friday, October 2, 2026
spot_imgspot_img
spot_imgspot_img

ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

- Advertisement -
- Advertisement -

ಸುಬ್ರಹ್ಮಣ್ಯ: ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಕುಮಾರಧಾರಾ ನದಿಯಲ್ಲಿ ಅ.೧೯ರ ಮದ್ಯಾಹ್ನ ಪತ್ತೆಯಾಗಿದೆ.

ಕುಮಾರಧಾರಾ ನದಿಯಲ್ಲಿ ತೇಲುತ್ತಿದ್ದ ಮೃತ ದೇಹವನ್ನು ಕಂಡ ಸ್ಥಳೀಯರು ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರ ನೆರವಿನೊಂದಿಗೆ ಗೃಹ ರಕ್ಷಕ ದಳದ ಸಿಬ್ಬಂದಿಗಳು ಕುಮಾರಧಾರ ನದಿಯಿಂದ ಮೃತ ದೇಹವನ್ನು ಮೇಲೆಕ್ಕೆತ್ತಿದ್ದಾರೆ.

ಬಳಿಕ ಸುಬ್ರಹ್ಮಣ್ಯ ಪ್ರಾರ್ಥಮಿಕ ಅರೋಗ್ಯ ಕೇಂದ್ರದ ಶವಾಗಾರದಲ್ಲಿ ಮೃತ ದೇಹವನ್ನು ಇರಿಸಲಾಗಿದೆ. ಮೃತ ಮಹಿಳೆಯ ವಯಸ್ಸು ಸುಮಾರು 55 ವರ್ಷ ಆಗಬಹುದೆಂದು ಅಂದಾಜಿಸಲಾಗಿದೆ.

ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಜಂಬೂರಾಜ್ ಮಹಾಜನ್, ಎ. ಎಸ್.ಐ ಮೋಹನ್. ಕೆ,ಮಹಾಲಕ್ಷ್ಮಿ, ಮಹೇಶ್ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಬಳಿಕವಷ್ಟೇ ಮೃತ ಮಹಿಳೆಯ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

- Advertisement -

Related news

error: Content is protected !!