Friday, April 19, 2024
spot_imgspot_img
spot_imgspot_img

ಸುಬ್ರಹ್ಮಣ್ಯ: ಪ್ರೌಢಶಾಲಾ ಶಿಕ್ಷಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಆರೋಪಿ ಅಂದರ್

- Advertisement -G L Acharya panikkar
- Advertisement -

ಸುಬ್ರಹ್ಮಣ್ಯ: ಇಲ್ಲಿನ ಸ್ಥಳೀಯ ಪ್ರೌಢ ಶಾಲಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕನೋರ್ವ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿದೆ.

ಅತ್ಯಾಚಾರದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕರೊಬ್ಬರನ್ನು ಸುಬ್ರಹ್ಮಣ್ಯ ಪೊಲೀಸರು ಆಗಸ್ಟ್ 8 ರಂದು ಬಂಧಿಸಿದ್ದಾರೆ. ರಾಯಚೂರು ಮೂಲದ ಗುರುರಾಜ್ ಬಂಧಿತ ಆರೋಪಿಯಾಗಿದ್ದಾನೆ. ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ಶಿಕ್ಷಕ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ಬಳಿಕ ಪುಸಲಾಯಿಸಿ ಅತ್ಯಾಚಾರವೆಸಗಿದ್ದ.

ವಿವಸ್ತ್ರಗೊಳಿಸಿ ಮೊಬೈಲ್ ಮೂಲಕ ಫೋಟೋ ತೆಗೆಯುತ್ತಿದ್ದ. ಫೋಟೋ ತೋರಿಸಿ ಮನೆಯಿಂದ ಹಣ ತರುವಂತೆ ಬೆದರಿಸುತ್ತಿದ್ದ ಎನ್ನಲಾಗಿದೆ. ಠಾಣೆಯಲ್ಲಿ ವಿದ್ಯಾರ್ಥಿನಿ ತಾಯಿ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದು, ಫೊಕ್ಸೋ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!