- Advertisement -
- Advertisement -



ಸುಬ್ರಹ್ಮಣ್ಯ : ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಶ್ರೀ ಸುಬ್ರಹ್ಮಣೇಶ್ವರ ಪದವಿ ಪೂರ್ವ ಕಾಲೇಜಿನ 7 ರಿಂದ 8 ವಿದ್ಯಾರ್ಥಿಗಳು ಸಂಜೆ ಕಾಲೇಜು ಬಿಟ್ಟು ಮನೆಗೆ ತೆರಳುತ್ತಿದ್ದರು. ವಿದ್ಯಾರ್ಥಿಗಳು ವಲ್ಲೀಶ ಸಭಾಭವನದ ಎದುರಿನಿಂದ ಸುಬ್ರಹ್ಮಣ್ಯ ಪೇಟೆ ಕಡೆ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.
ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡಿದ್ದಾರೆ. ಅವರಿಗೆ ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಇನ್ನೂ 3-4 ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎನ್ನಲಾಗಿದೆ.
- Advertisement -