Friday, July 31, 2026
spot_imgspot_img
spot_imgspot_img

ಸುಬ್ರಹ್ಮಣ್ಯ: ಸಾಲದ ಹೊರೆಯಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಸುಬ್ರಹ್ಮಣ್ಯ: ಸಾಲದ ಹೊರೆಯಿಂದ ಬೇಸೆತ್ತು ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಏನೆಕಲ್ಲು ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರು ಕಡಬ ತಾಲೂಕು ಏನೆಕಲ್ಲು ಗ್ರಾಮದ ಕುಕ್ಕಪ್ಪನ ಮನೆ ಮೋಹನ ಕುಮಾರ(51) ಎಂದು ಗುರುತಿಸಲಾಗಿದೆ.

ಇತ್ತೀಚೆಗೆ ಮನೆ ನಿರ್ಮಾಣಕ್ಕಾಗಿ ಕೈ ಸಾಲ ಹಾಗೂ ಕೃಷಿ ಚಟುವಟಿಕೆಗಳಿಗೆ ಬ್ಯಾಂಕು ಸಾಲಗಳನ್ನು ಮಾಡಿಕೊಂಡಿದ್ದರು ಎನ್ನಲಾಗಿದೆ. ಮಾಡಿದ ಸಾಲವನ್ನು ತೀರಿಸಲಾಗದೇ ಬೇಸರದಿಂದ ಇರುತ್ತಿದ್ದ ಎಂದು ಮೃತರ ಅಣ್ಣ ಭಾಸ್ಕರ .ಕೆ.ಎಂ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮುಂಜಾನೆ ಎಂದಿನಂತೆ ತೋಟಕ್ಕೆ ಹೋದವನು 9 ಗಂಟೆಯ ತನಕ ಮನೆಗೆ ಬಾರದೇ ಇದ್ದಾಗ ಮನೆಯವರು ಸೇರಿಕೊಂಡು ತೋಟದಲ್ಲಿ ಹುಡುಕಾಡಿದಾಗ ಹಲಸಿನ ಮರವೊಂದಕ್ಕೆ ನೈಲಾನ್ ಹಗ್ಗವನ್ನು ಕುಣಿಕೆಯನ್ನಾಗಿ ಮಾಡಿಕೊಂಡು ಅದನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಘಟನೆಯ ಬಗ್ಗೆ ಸುಬ್ರಹ್ಮಣ್ಯ ಠಾಣೆ ಯಂತೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!